ನಮ್ಮ ಸಿಂಧನೂರು.ಜ.24
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆ ಜಾರಿ ತರಬೇಕು, ರಾಜ್ಯದಲ್ಲಿ ಜಾರಿಗೊಳಿಸಿರುವ ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿದ್ಯುತ್ ತಿದ್ದುಪಡಿ ಮಸೂದೆ ೨೦೨೨ನ್ನು ರದ್ದುಗೊಳಿಸುವುದು, ಕೃಷಿ ಸಬ್ಸಿಡಿ ಕಡಿತಗೊಳಿಸಿರುವುದನ್ನು ಹಿಂಪಡೆಯಬೇಕು, ಸಾಲ ನೀಡಿದ ಬ್ಯಾಂಕ್ಗಳು ರೈತರ ಆಸ್ತಿಗಳನ್ನು ಜಪ್ತಿ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು; ಮತ್ತು ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ದೆಹಲಿ ಹೋರಾಟದಲ್ಲಿ ರೈತರ ಮೇಲೆ ಹಾಕಿರುವ ಸುಳ್ಳು ಕೇಸ್ಗಳನ್ನು ವಾಪಸ್ ಪಡೆಯಬೇಕು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜೆಸಿಟಿಯು ಕರೆಯ ಮೇರೆಗೆ ಜನವರಿ ೨೬ರಂದು ರೈತ ವಿರೋಧಿ ಕೃಷಿ ಕಾನೂನುಗಳ ರದ್ದತಿ ಹೋರಾಟ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದಿಂದ ಸಿಂಧನೂರಿನಲ್ಲಿ ಟ್ರಾö್ಯಕ್ಟರ್ ಪೆರೇಡ್ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕರಾದ ಅಮೀನ್ಪಾಷಾ ದಿದ್ದಿಗಿ, ಡಿ.ಎಚ್.ಕಂಬಳಿ, ಡಿ.ಎಚ್.ಪೂಜಾರ್, ರಮೇಶ ಪಾಟೀಲ್ ಬೇರಿಗೆ, ಚಂದ್ರಶೇಖರ ಗೊರಬಾಳ, ನಾಗರಾಜ್ ಪೂಜಾರ್ ತಿಳಿಸಿದ್ದಾರೆ.ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ೨೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ರಾಯಚೂರು ರಸ್ತೆಯಲ್ಲಿರುವ ಯಲ್ಲಮ್ಮ ದೇವಸ್ಥಾನದ ಹತ್ತಿರದಿಂದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಎಪಿಎಂಸಿ ವರೆಗೆ ರೈತರ ಟ್ರಾö್ಯಕ್ಟರ್ ಪೆರೇಡ್ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ-ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ, ಐತಿಹಾಸಿಕ ದೆಹಲಿ ರೈತ ಹೋರಾಟದ ಲಿಖಿತ ಭರವಸೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯದ ಭೀಕರ ಬರಗಾಲವನ್ನು ರಾಷ್ಟಿçÃಯ ವಿಪತ್ತು ಎಂದು ಘೋಷಿಸಿ, ಸಾಲಮನ್ನಾ, ವೈಜ್ಞಾನಿಕ ಬೆಳೆ ನಷ್ಟ ಪರಿಹಾರ, ಆಹಾರ-ಉದ್ಯೋಗ-ಭೂಮಿ ಹಕ್ಕು ಖಾತರಿಗೆ ಆಗ್ರಹಿಸಿ, ಸ್ವಾತಂತ್ರ‍್ಯ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ, ಧರ್ಮ ನಿರಪೇಕ್ಷ (ಜಾತ್ಯತೀತ), ಪ್ರಜಾತಾಂತ್ರಿಕ ಗಣತಂತ್ರದ ಸಂವಿಧಾನ ರಕ್ಷಣೆಗಾಗಿ ಆಗ್ರಹಿಸಿ, ರೈತ-ಕಾರ್ಮಿಕ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳು ಹಾಗೂ ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಲು ಒತ್ತಾಯಿಸಿ, ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಪರ್ಯಾಯ ಜನಪರ ನೀತಿಗಳಿಗಾಗಿ ಈ ಪೆರೇಡ್ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಹೋರಾಟಕ್ಕೆ ರೈತರು, ಕಾರ್ಮಿಕರು, ವಿದ್ಯಾರ್ಥಿ-ಯುವಜನರು, ಮಹಿಳೆಯರು, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ರಮೇಶ ಪಾಟೀಲ್ ಬೇರಿಗಿ, ಬಿ.ಎನ್.ಯರದಿಹಾಳ, ಬಸವರಾಜ ಹಂಚಿನಾಳ ಸೇರಿದಂತೆ ಇನ್ನಿತರರು ಇದ್ದರು.