ಗಂಗಾವತಿ (ಕೊಪ್ಪಳ ಜಿಲ್ಲೆ) ಏಪ್ರಿಲ್ 11
ಪ್ರಸಕ್ತ ಸಾಲಿನ ಪಿಯು ಫಲಿತಾಂಶ ಪ್ರಕಟವಾಗಿದ್ದು, ತಾಲೂಕಿನ ಶ್ರೀರಾಮನಗರದ ಶ್ರೀಮತಿ ಎ.ಕೆ.ಆರ್.ದೇವಿ ಮೆಮೋರಿಯಲ್ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ.100ಕ್ಕೆ 100ರಷ್ಟು ಫಲಿತಾಂಶ ದೊರೆತಿದೆ. ವಾಣಿಜ್ಯ ವಿಭಾಗದಲ್ಲಿ ಶೇ.95 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ಪಿಯು ಸೈನ್ಸ್‌ನಲ್ಲಿ 203 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್
ಕಾಲೇಜಿನ ವಿಜ್ಞಾನ ವಿಭಾಗದ 203 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಅಲ್ಲದೇ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸೈನ್ಸ್ ನಲ್ಲಿ ಕಾಲೇಜು ವಿದ್ಯಾರ್ಥಿ ರಾಜ್ಯಕ್ಕೆ 9ನೇ ರ‍್ಯಾಂಕ್, ಜಿಲ್ಲೆಗೆ ತೃತೀಯ ಸ್ಥಾನ
ಗ್ರಾಮೀಣ ಭಾಗದ ಕಾಲೇಜು ಕಳೆದ ಹಲವು ವರ್ಷಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಬಸವರಾಜ 591 (98.50) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 9ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾನೆ. ಕಾರ್ತಿಕ್ ಎಚ್.ಎಂ. 589 (98.17), ಅವಿನಾಶ್ 589 (98.17), ನಾಗೇಶ 586 (97.67) ಅಂಕಗಳನ್ನು ಗಳಿಸಿ ಸಾಧನೆ ತೋರಿದ್ದಾರೆ.
ವಾಣಿಜ್ಯ ವಿಭಾಗದಲ್ಲೂ ಗಮನಾರ್ಹ ಸಾಧನೆ
ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವೀರನಗೌಡ 586 (97.67), ಗಂಗಾ.ಜಿ. 584 (97.33) ಹಾಗೂ ಎಚ್.ಎಂ.ಸ್ಫೂರ್ತಿ 575 (95.83) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಾಧಿಕಾರಿ ಬಸವರಾಜ.ಬಿ ಹಾಗೂ ಪ್ರಾಚಾರ್ಯರು ಅಮರೇಶ ಪಾಟೀಲ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

