ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 13
ಸುಪ್ರಿಂಕೋರ್ಟ್ ಆದೇಶದನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ, ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯಿಂದ ರಾಜ್ಯಮಟ್ಟದ ಮಾದಿಗ ವಕೀಲರ ಬೃಹತ್ ಸಮಾವೇಶವನ್ನು ಡಿ.14ರಂದು ಚಿತ್ರದುರ್ಗದ ತ.ರಾ.ಸು.ರಂಗಮAದಿರದಲ್ಲಿ ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಬಾಲಸ್ವಾಮಿ ವಕೀಲರು ಹಾಗೂ ಸಾಲೊಮನ್ ಬಿ.ಬಡಿಗೇರ ತಿಳಿಸಿದರು.
ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. “ಆಗಸ್ಟ್ 1, 2024ರಂದು ಪರಿಶಿಷ್ಟ ಜಾತಿ ಪಂಗಡಗಳಲ್ಲಿ ಒಳಮೀಸಲಾತಿ ಕಲ್ಪಿಸಲು ಆಯಾ ರಾಜ್ಯಗಳಿಗೆ ಅಧಿಕಾರ ಇದೆಯೆಂದು 7 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಂದಿರುವುದು ತುಳಿತಕ್ಕೊಳಗಾದ ಶೋಷಿತ ವರ್ಗಗಳಿಗೆ ಶಿಕ್ಷಣ, ಉದ್ಯೋಗ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಒಂದು ರಹದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಳಂಬ ನೀತಿಯನ್ನು ಖಂಡಿಸಿ, ಒಳಮೀಸಲಾತಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಶೀಘ್ರವಾಗಿ ಜಾರಿಗೊಳಿಸಲು ಒತ್ತಾಯಿಸಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ವಕೀಲ ಬಂಧುಗಳು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು. ಈ ವೇಳೆ ಶೇಖರಪ್ಪ ಧುಮುತಿ, ಜಗದೀಶ ಸುಕಾಲಪೇಟೆ, ನಿರುಪಾದೆಪ್ಪ, ಲಕ್ಷಿö್ಮ ಹೆಡಗಿಬಾಳಕ್ಯಾಂಪ್, ಸಣ್ಣ ದುರುಗಪ್ಪ ಜವಳಗೇರಾ, ಪರಮೇಶಪ್ಪ ಕಲ್ಮಂಗಿ, ಹನುಮರೆಡ್ಡೆಪ್ಪ, ಹುಲ್ಲೇಶ ಸೇರಿದಂತೆ ಇನ್ನಿತರ ವಕೀಲರು ಇದ್ದರು.