ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 26
ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 26-06-2025 ಗುರುವಾರದಂದು 30,838 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 52.94 ಟಿಎಂಸಿ ನೀರು ಸಂಗ್ರಹವಿದೆ. 198 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.62 ಟಿಎಂಸಿ ನೀರು ಸಂಗ್ರಹವಿದ್ದರೆ, 604 ಕ್ಯೂಸೆಕ್ ನೀರು ಒಳಹರಿವಿತ್ತು, 1,995 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಶಿವಮೊಗ್ಗದ ಮಲೆನಾಡ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
