ನಮ್ಮಸಿಂಧನೂರು, ಸೆಪ್ಟೆಂಬರ್ 04
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:04-09-2024 ಬುಧವಾರದಂದು 39,945 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 15,235 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 101.45 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 73.78 ಟಿಎಂಸಿ ನೀರು ಸಂಗ್ರಹವಿದ್ದರೆ, 559 ಕ್ಯೂಸೆಕ್ ನೀರು ಒಳಹರಿವಿತ್ತು, 8737 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. 19ನೇ ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗಿದ್ದರೂ ಪುನಃ ಜಲಾಶಯ ತುಂಬುತ್ತಿರುವುದು ರೈತರಲ್ಲಿ ಸಂತಸ ಮನೆಮಾಡಿದೆ. ಜಲಾಶಯದ 19ನೇ ಗೇಟ್ ಕೊಚ್ಚಿ ಹೋದ ಸಂದರ್ಭದಲ್ಲಿ ವೀಕ್ಷಣೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಸ್ಟಾಪ್‌ಲಾಗ್ ಗೇಟ್ ಅಳವಡಿಸಿದ ನಂತರ, ಜಲಾಶಯ ಮತ್ತೆ ಭರ್ತಿಯಾಗಲಿದ್ದು ನಾನೇ ಬಂದು ಬಾಗಿನ ಅರ್ಪಿಸುವುದಾಗಿ ಮಾಧ್ಯಮದವರ ಮುಂದೆ ಹೇಳಿದ್ದರು. ಈ ಮಾತು ನಿಜವಾಗಿದೆ.