ನಮ್ಮ ಸಿಂಧನೂರು, ಅಕ್ಟೋಬರ್ 02
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:02-10-2024 ಬುಧವಾರದಂದು 8,726 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,175 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.42 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 54.96 ಟಿಎಂಸಿ ನೀರು ಸಂಗ್ರಹವಿತ್ತು. 1,077 ಕ್ಯೂಸೆಕ್ ನೀರು ಒಳಹರಿವಿತ್ತು, 9,715 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ಆಗಸ್ಟ್ 10ಶನಿವಾರದಂದು ತುಂಗಭದ್ರಾ ಡ್ಯಾಂನ 19 ನೇ ಕ್ರಸ್ಟ್‌ಗೇಟ್ ಕೊಚ್ಚಿಹೋದ ಪರಿಣಾಮ, ಸ್ಟಾಪ್‌ಲಾಗ್ ಗೇಟ್ ಅಳವಡಿಸುವ ಸಂಬAಧ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿತ್ತು. ಬಹಳಷ್ಟು ಪ್ರಮಾಣದ ನೀರು ಹರಿಬಿಟ್ಟರೂ ಪುನಃ ಡ್ಯಾಂ ಭರ್ತಿಯಾಗಿದೆ. ನದಿಮೂಲ ಮತ್ತು ಮಲೆನಾಡ ಭಾಗದಲ್ಲಿ ಮಳೆಯ ಪ್ರಮಾಣ ಕಳೆದ ಹಲವು ದಿನಗಳಿಂದ ಕ್ಷೀಣಿಸಿದ್ದು, ಹೀಗಾಗಿ ಒಳಹರಿವಿನಲ್ಲಿ ಕಡಿಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.