ನಮ್ಮ ಸಿಂಧನೂರು, ಆಗಸ್ಟ್ 25
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:25-08-2024 ಭಾನುವಾರದಂದು 23,725 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,023 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 86.27 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 81.10 ಟಿಎಂಸಿ ನೀರು ಸಂಗ್ರಹವಿದ್ದರೆ, 1,636 ಕ್ಯೂಸೆಕ್ ನೀರು ಒಳಹರಿವಿತ್ತು, 10,211 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಅಪಾರ ಪ್ರಮಾಣದ ನೀರು ನದಿಗೆ ಹರಿಬಿಟ್ಟರೂ ಒಳಹರಿವಿನ ಪ್ರಮಾಣ ನಿಧಾನಗತಿಯಲ್ಲಿ ಹೆಚ್ಚುತ್ತಿದ್ದು, ಪುನಃ ಜಲಾಶಯ ಭರ್ತಿಯಾಗುವ ಭರವಸೆವಿದೆ. ಮಲೆನಾಡಿನಲ್ಲಿ ಕಳೆದ ಎರಡು ವಾರಗಳಿಂದ ಮಳೆಯ ಪ್ರಮಾಣದ ಕುಸಿದಿದ್ದು, ಆದರೂ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ನಿರಂತರ ಜಿನಿ ಜಿನಿ ಮಳೆ ಮುಂದುವರಿದಿದೆ.