ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 31,723 ಕ್ಯೂಸೆಕ್ ಒಳಹರಿವು

Spread the love

ನಮ್ಮ ಸಿಂಧನೂರು, ಆಗಸ್ಟ್ 24
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:24-08-2024 ಮಂಗಳವಾರದಂದು 31,723 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 9,830 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 85.11 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 81.88 ಟಿಎಂಸಿ ನೀರು ಸಂಗ್ರಹವಿದ್ದರೆ, 2,032 ಕ್ಯೂಸೆಕ್ ನೀರು ಒಳಹರಿವಿತ್ತು, 10,208 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಅಪಾರ ಪ್ರಮಾಣದ ನೀರು ನದಿಗೆ ಹರಿಬಿಟ್ಟರೂ ಒಳಹರಿವಿನ ಪ್ರಮಾಣ ನಿಧಾನಗತಿಯಲ್ಲಿ ಹೆಚ್ಚುತ್ತಿದ್ದು, ಪುನಃ ಜಲಾಶಯ ಪೂರ್ಣಗೊಳ್ಳುವ ಭರವಸೆ ರೈತರದ್ದಾಗಿದೆ. ಮಲೆನಾಡಿನಲ್ಲಿ ಕಳೆದ ಎರಡು ವಾರಗಳಿಂದ ಮಳೆ ಪ್ರಮಾಣದ ಒಂದಿಷ್ಟು ಕಡಿಮೆಯಾಗಿದ್ದು, ಆದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ದಿನಬಿಟ್ಟು ದಿನ ಮಳೆ ಸುರಿಯುತ್ತಿರುವುದರಿಂದ, ನೀರಿನ ಕೊರತೆ ಕಾಡುತ್ತಿಲ್ಲ.


Spread the love

Leave a Reply

Your email address will not be published. Required fields are marked *