ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 37,489 ಕ್ಯೂಸೆಕ್ ಒಳಹರಿವು

Spread the love

ನಮ್ಮ ಸಿಂಧನೂರು, ಆಗಸ್ಟ್ 23
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:23-08-2024 ಶುಕ್ರವಾರದಂದು 37,489 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 9,488 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 83.25 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 82.63 ಟಿಎಂಸಿ ನೀರು ಸಂಗ್ರಹವಿತ್ತು. 1,606 ಕ್ಯೂಸೆಕ್ ನೀರು ಒಳಹರಿವಿತ್ತು, 10,244 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. 13 ದಿನಗಳ ಹಿಂದೆ ಆಗಸ್ಟ್ 10 ಶನಿವಾರದಂದು ತುಂಗಭದ್ರಾ ಡ್ಯಾಂನ ೧೯ನೇ ಕ್ರಸ್ಟ್ಗೇಟ್ ಕೊಚ್ಚಿಹೋದ ಕಾರಣ ಅಪಾರ ಪ್ರಮಾಣದ ನೀರನ್ನು ಎಲ್ಲ ಗೇಟ್‌ಗಳಿಂದ ಹೊರಬಿಟ್ಟಿದ್ದನ್ನು ಸ್ಮರಿಸಬಹುದಾಗಿದೆ. ನದಿಗೆ ಬಹಳಷ್ಟು ಪ್ರಮಾಣದ ನೀರು ಹರಿದು ಹೋದರೂ ಪುನಃ ಡ್ಯಾಂ ಮೈದುಂಬಿಕೊಳ್ಳುತ್ತಿರುವುದು ರೈತರಲ್ಲಿ ಹರ್ಷ ಮೂಡಿಸಿದೆ.


Spread the love
ಟ್ಯಾಗ್‌ಗಳು:

Leave a Reply

Your email address will not be published. Required fields are marked *