ಸಿಂಧನೂರು: ಮಲೆನಾಡ ಭಾಗದಲ್ಲಿ ಭಾರಿ ಮಳೆ, ತುಂಗಭದ್ರಾ ಡ್ಯಾಂಗೆ 97,751 ಕ್ಯೂಸೆಕ್ ಒಳಹರಿವು

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಅಕ್ಟೋಬರ್ 24

ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 24-10-2024 ಗುರುವಾರದಂದು 97,751 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 101.54 ಟಿಎಂಸಿ ನೀರು ಸಂಗ್ರಹವಿದ್ದರೆ, 96,487 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 35.65 ಟಿಎಂಸಿ ನೀರು ಸಂಗ್ರಹವಿದ್ದರೆ, 508 ಕ್ಯೂಸೆಕ್ ನೀರು ಒಳಹರಿವಿತ್ತು, 9,790 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ನಾಲ್ಕಾರು ದಿನಗಳಿಂದ ಶಿವಮೊಗ್ಗ ಸೇರಿದಂತೆ ಮಲೆನಾಡ ಭಾಗ ಹಾಗೂ ನದಿ ಮೂಲದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಹೆಚ್ಚುತ್ತಿದೆ ಎಂದು ಮೂಲಗಳು ತಿಳಿಸಿವೆ.


Spread the love
ಟ್ಯಾಗ್‌ಗಳು:

Leave a Reply

Your email address will not be published. Required fields are marked *