ನಮ್ಮ ಸಿಂಧನೂರು, ಸೆಪ್ಟೆಂಬರ್ 24
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:24-09-2024ಮಂಗಳವಾರದಂದು 7,980 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,153 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.54 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 60.91ಟಿಎಂಸಿ ನೀರು ಸಂಗ್ರಹವಿತ್ತು. 6,065 ಕ್ಯೂಸೆಕ್ ನೀರು ಒಳಹರಿವಿತ್ತು, 3,455 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ 10 ವರ್ಷಗಳ ಹಿಂದೆ ಇದೇ ದಿನ ಜಲಾಶಯದಲ್ಲಿ 13,327 ಟಿಎಂಸಿ ನೀರು ಸಂಗ್ರಹವಿತ್ತು. 11,766 ಕ್ಯೂಸೆಕ್ ನೀರು ಒಳಹರಿವಿತ್ತು, 84.54 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ಆಗಸ್ಟ್ 10 ಶನಿವಾರದಂದು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋದ ಪರಿಣಾಮ, ಸ್ಟಾಪ್‌ಲಾಗ್ ಗೇಟ್ ಅಳವಡಿಸುವ ಸಂಬಂಧ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿತ್ತು. ಬಹಳಷ್ಟು ಪ್ರಮಾಣದ ನೀರು ಹರಿಬಿಟ್ಟರೂ ಪುನಃ ಡ್ಯಾಂ ಭರ್ತಿಯಾಗಿದೆ. ನದಿಮೂಲ ಮತ್ತು ಮಲೆನಾಡ ಭಾಗದಲ್ಲಿ ಮಳೆ ಕ್ಷೀಣಿಸಿದ್ದು, ಕಳೆದ ಕೆಲವು ದಿನಗಳಿಂದ ದಿನ ಕನಿಷ್ಠ 10 ಸಾವಿರ ಕ್ಯೂಸೆಕ್‌ಗೂ ನೀರು ಡ್ಯಾಮಿಗೆ ಹರಿದು ಬರುತ್ತಿತ್ತು, ಆದರೆ ಮಂಗಳವಾರ 7,980 ಕ್ಯೂಸೆಕ್‌ಗೆ ಕುಸಿದಿದೆ.