ನಮ್ಮ ಸಿಂಧನೂರು, ಆಗಸ್ಟ್ 30
ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿದೆ. ಅಧ್ಯಕ್ಷರಾಗಿ ಶ್ಯಾಮಿದಸಾಬ್ ಚೌದರಿ ಹಾಗೂ ಉಪಾಧ್ಯಕ್ಷರಾಗಿ ಗಂಗಮ್ಮ ಯಲ್ಲಪ್ಪ ಭೋವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರರು ಆದ ಅರುಣಕುಮಾರ್ ದೇಸಾಯಿ ಅವರು ಪ್ರಮಾಣಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ತುರ್ವಿಹಾಳ, ಶಿವನಗೌಡ ಗೊರೇಬಾಳ, ಹನುಮಂತಪ್ಪ ಮುದ್ದಾಪುರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.