ನ.25ರಂದು ವಾರ್ತಾ ಭಾರತಿ ಕನ್ನಡ ದೈನಿಕ ಓದುಗರ ಸಭೆ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ನವೆಂಬರ್ 24

ಕಲಬುರಗಿಯಿಂದ ಕಲ್ಯಾಣ ಕರ್ನಾಟಕ ಆವೃತ್ತಿಯ ವಾರ್ತಾ ಭಾರತಿ ಕನ್ನಡ ದಿನಪತ್ರಿಕೆ ಬಿಡುಗಡೆಯ ಹಿನ್ನೆಲೆಯಲ್ಲಿ ನಗರದ ಮಿಲಾಪ್ ಶಾದಿಮಹಲ್‌ನಲ್ಲಿ ದಿನಾಂಕ: 25-11-2025 ಮಂಗಳವಾರದಂದು ಬೆಳಿಗ್ಗೆ 11 ಗಂಟೆಗೆ ಓದುಗರ, ವೀಕ್ಷಕರ ಹಾಗೂ ಹಿತೈಷಿಗಳ ಸಭೆ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಭೆಯಲ್ಲಿ ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಮೌಲಾನಾ ತಾಜಿಮುದ್ದೀನ್ ಸಹಾಬ್, ದಲಿತಪರ ಹೋರಾಟಗಾರ ಎಚ್.ಎನ್.ಬಡಿಗೇರ್, ಸಿಪಿಎ(ಎಂಎಲ್) ಮಾಸ್‌ಲೈನ್ ರಾಜ್ಯ ಕಾರ್ಯದರ್ಶಿ ಡಿ.ಎಚ್.ಪೂಜಾರ್, ಪ್ರಗತಿಪರ ಚಿಂತಕ ಚಂದ್ರಶೇಖರ ಗೊರಬಾಳ, ಹಿರಿಯ ಮುಖಂಡ ಪರಶುರಾಮ ಚಿಲ್ಜೇರಿ, ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮುಹಮ್ಮದ್ ಹುಸೈನ್ ಪಾಲ್ಗೊಳ್ಳುವರು. ವಾರ್ತಾ ಭಾರತಿ ದಿನಪತ್ರಿಕೆ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರು ಭಾಗವಹಿಸುವರು ಎಂದು ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *